ಬೆಂಗಳೂರು:ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ನವರು ಹೀಗೆ ಅವಿಶ್ವಾಸ ನಿರ್ಣಯ ಕೈಗೊಳ್ಳುತ್ತಿರಲಿ. ಹೀಗೆ ಮಾಡೋದರಿಂದ ನನಗೆ ಆರು ತಿಂಗಳ ಕಾಲ ಹೆಚ್ಚು ವಿಶ್ವಾಸ ಬರುತ್ತದೆ ಎನ್ನುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರತಿಪಕ್ಷ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ವಿಧಾನಸೌಧಲ್ಲಿ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ತೀಕ್ಷ್ಣವಾಗಿ ಹೇಳಿದರು.