ಬೆಂಗಳೂರು: ಮರಾಠಿ ಭಾಷೆಗೂ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟೀಕರಣ ನೀಡಿದ್ದಾರೆ.
ಮರಾಠಿ ಭಾಷೆಗೂ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ: ಸಿಎಂ ಬಿಎಸ್ವೈ - ಮರಾಠಿ ಅಭಿವೃದ್ಧಿ ಪ್ರಾಧಿಕಾರ
ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ನಿರ್ಧಾರವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡು ವಿವರಣೆ ನೀಡಿದ್ದಾರೆ.
'ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ' ಎಂದು ಟ್ವೀಟ್ ಮೂಲಕ ಸಿಎಂ ತಿಳಿಸಿದ್ದಾರೆ.