ಬೆಂಗಳೂರು: ನಾನು ಪ್ರತಿ ಬಾರಿ ಮುಖ್ಯಮಂತ್ರಿ ಆದಾಗಲೂ ಅಗ್ನಿ ಪರೀಕ್ಷೆ ಎದುರಾಗಿದೆ. ಮಳೆ, ಪ್ರವಾಹದಿಂದಾಗಿ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಮುಖ್ಯಮಂತ್ರಿ ಆದಾಗಲೆಲ್ಲ ಅಗ್ನಿ ಪರೀಕ್ಷೆ ಎದುರಾಗಿದೆ: ಯಡಿಯೂರಪ್ಪ - ನೆರೆ ಹಾವಳಿ
ರಾಜ್ಯ ಸರ್ಕಾರದಿಂದ ಈಗಾಗಲೇ ಎರಡೂವರೆ ಸಾವಿರ ಕೋಟಿ ವೆಚ್ಚದಲ್ಲಿ ರಸ್ತೆ ಸೇತುವೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಮಳೆಯಿಂದ ಮನೆ ಕಳೆದುಕೊಂಡವರಿಗೆ ಐದು ಲಕ್ಷ ನೀಡಲಾಗುತ್ತಿದೆ. ಭಾಗಶಃ ಹಾನಿಯಾದವರಿಗೆ ಒಂದು ಲಕ್ಷ ರೂಪಾಯಿ ಕೊಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಅಲ್ಲದೆ, ತಾವು ಮುಖ್ಯಮಂತ್ರಿ ಆದಾಗಲೆಲ್ಲ ಇಂತಹ ಅಗ್ನಿ ಪರೀಕ್ಷೆಗಳು ಎದುರಾಗುತ್ತವೆ ಎಂದಿದ್ದಾರೆ.
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಮಠಕ್ಕೆ ಭೇಟಿ ನೀಡುವ ಮುನ್ನ ಮಾತನಾಡಿದ ಅವರು, ನೆರೆ ಹಾವಳಿ ಸರಿದೂಗಿಸುವ ಸಲುವಾಗಿ ಕೆಲವು ಅಭಿವೃದ್ಧಿ ಯೋಜನೆಗಳನ್ನ ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಎರಡೂವರೆ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಸೇತುವೆಗಳ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಮಳೆಯಿಂದ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ನೀಡಲಾಗಿತ್ತಿದೆ. ಭಾಗಶಃ ಹಾನಿಯಾಗಿದ್ದರೆ ಒಂದು ಲಕ್ಷ ಕೊಡಲಾಗುತ್ತದೆ. ಮೊದಲ ಹಂತದಲ್ಲಿ ಒಂದು ಲಕ್ಷ, ಭಾಗಶಃ ಹಾನಿಯಾದವರಿಗೆ 25 ಸಾವಿರ ಹಣ ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ನಾಲ್ಕೈದು ದಿನಗಳಲ್ಲಿ ಅಗತ್ಯ ನೆರವು ಸಿಗಲಿದೆ. ರೈತರ ಸಾಲಮನ್ನಾಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುತ್ತೇವೆ. ಹಂತಹಂತವಾಗಿ ರೈತರ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡುತ್ತೇನೆ ಎಂದು ಯಡಿಯೂರಪ್ಪ ಇದೇ ವೇಳೆ ಹೇಳಿದರು.