ETV Bharat Karnataka

ಕರ್ನಾಟಕ

karnataka

ETV Bharat / state

ಇಂದು ಸಿಎಂ ಸುದ್ದಿಗೋಷ್ಠಿ: ವಿಶೇಷ ಪ್ಯಾಕೇಜ್, ಲಾಕ್‌ಡೌನ್ ವಿಸ್ತರಣೆ ಘೋಷಣೆ ಸಾಧ್ಯತೆ - ಯಡಿಯೂರಪ್ಪ ಸುದ್ದಿಗೋಷ್ಠಿ

ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ, ಕಾರ್ಮಿಕರು ಹಾಗೂ ಬಡ ವರ್ಗದವರಿಗೆ ಪರಿಹಾರ ಘೋಷಿಸುವ ಸಾಧ್ಯತೆಯೂ ಇದೆ.

cm-bsy-to-held-press-meet-today-about-lockdown
ಇಂದು ಸಿಎಂ ಸುದ್ದಿಗೋಷ್ಠಿ
author img

By

Published : May 19, 2021, 7:01 AM IST

ಬೆಂಗಳೂರು:ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಲಾಕ್‌ಡೌನ್ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಗೂ ಮುನ್ನ ಸಿಎಂ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮೇ 24ರಿಂದ 31ರವರೆಗೆ ಲಾಕ್‌ಡೌನ್ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಪ್ರತಿಪಕ್ಷ, ಸಾರ್ವಜನಿಕರಿಂದ ಸಾಕಷ್ಟು ಒತ್ತಡ ಬರುತ್ತಿದೆ. ಹೀಗಾಗಿ ಈ ಬಗ್ಗೆಯೂ ಕಾರ್ಮಿಕರು ಹಾಗೂ ಬಡ ವರ್ಗದವರಿಗೆ ಪರಿಹಾರ ಘೋಷಿಸುವ ಸಾಧ್ಯತೆಯೂ ಇದೆ.

ಹಿರಿಯ ಸಚಿವರ ಜೊತೆ ಸಭೆ ನಡೆಸಿ, ಲಾಕ್‌ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಅಂತಿಮವಾಗಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

ಇದನ್ನೂ ಓದಿ:ಜೀವನ ಬದಲಿಸಿದ ತೆಂಗು ಕೀಳುವ ಕಾಯಕ: ಇವರ ತಿಂಗಳ ಆದಾಯ ಕೇಳಿದ್ರೆ ಶಾಕ್​ ಆಗ್ತೀರಾ!

ABOUT THE AUTHOR

author-img

...view details