ಕರ್ನಾಟಕ

karnataka

ಕಸ್ತೂರಿ ರಂಗನ್ ವರದಿ ಜಾರಿ;  ಜಾವಡೇಕರ್ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿ ಚರ್ಚೆ ನಡೆಸಿದರು.

By

Published : May 21, 2020, 6:22 PM IST

Published : May 21, 2020, 6:22 PM IST

CM BSY Video Conference with Union Minister Javadekar on Kasturi Rangan Report
ಕೇಂದ್ರ ಸಚಿವರ ಜಾವಡೇಕರ್ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗವಹಿಸಿ, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸುವ ಕುರಿತು ಚರ್ಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ.

ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸಚಿವರ ಜಾವಡೇಕರ್ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತ ಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು. ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ABOUT THE AUTHOR

...view details