ಬೆಂಗಳೂರು:ಮಹಾಮಾರಿ ಕೋವಿಡ್-19 ಹತೋಟಿ ಹಾಗೂ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವಿವಿಧ ಜಿಲ್ಲೆಯ ಜನ ಪ್ರತಿನಿಧಿಗಳ ಜೊತೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಸಂಸತ್ ಸದಸ್ಯರು (ಲೋಕಸಭೆ ಮತ್ತು ರಾಜ್ಯಸಭೆ) ಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.