ಕರ್ನಾಟಕ

karnataka

ETV Bharat / state

ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸುದ್ದಿಗೋಷ್ಠಿ; ಸಂಪೂರ್ಣ ಲಾಕ್‌ಡೌನ್ ಘೋಷಣೆ ಸಾಧ್ಯತೆ - ಸಂಪೂರ್ಣ ಲಾಕ್‌ಡೌನ್ ಘೋಷಣೆ

ಸಿಎಂ ಯಡಿಯೂರಪ್ಪ ಇಂದಿನ ಸುದ್ದಿಗೋಷ್ಠಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರಲಿದ್ದಾರೆ ಎನ್ನಲಾಗುತ್ತಿದೆ. ಸಧ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಲಾಕ್‌ಡೌನ್ ಬಗ್ಗೆ ಇದ್ದ ಅನುಮಾನಗಳಿಗೆ ತೆರೆ ಎಳೆಯಲಿದ್ದಾರೆ.

CM BSY will announceing lockdown
ಸಿಎಂ ಯಡಿಯೂರಪ್ಪ

By

Published : May 7, 2021, 6:34 PM IST

Updated : May 7, 2021, 6:41 PM IST

ಬೆಂಗಳೂರು:ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಕಠಿಣ ಲಾಕ್‌ಡೌನ್ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್‌ಡೌನ್ ಹೇರುವ ಸಂಬಂಧ ಘೋಷಣೆ ಮಾಡಲಿದ್ದಾರೆ. ರಾಜ್ಯಾದ್ಯಂತ ಕಠಿಣ ಕ್ರಮಗಳ ಬಗ್ಗೆ ಸಿಎಂ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿಲ್ಲ ಲಾಕ್​ಡೌನ್​, ಇದು ಆರ್ಥಿಕತೆ ಕುಸಿತಕ್ಕೆ ಕಾರಣ ಎಂದ ಕೆಸಿಆರ್​

ಸಂಜೆ 7 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಸಿಎಂ ಕಠಿಣ ಲಾಕ್‌ಡೌನ್ ಬಗ್ಗೆ ಘೋಷಣೆ ಮಾಡಲಿದ್ದಾರೆ. ಅದರ ಜೊತೆಗೆ ದುರ್ಬಲ ವರ್ಗದವರಿಗೆ ನೀಡುವ ಪ್ಯಾಕೇಜ್ ಬಗ್ಗೆನೂ ಘೋಷಣೆ ಮಾಡುವ ಸಾಧ್ಯತೆ ಇದೆ.

ಬೆಳಗ್ಗೆ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ನಡೆಸಿದ ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಹೇರುವ ಬಗ್ಗೆ ಸಲಹೆ ನೀಡಿದ್ದರು. ಸದ್ಯದ ಲಾಕ್‌ಡೌನ್ ನಿಂದ ಯಾವುದೇ ಪ್ರಯೋಜನವಾಗದ ಕಾರಣ, ಕಠಿಣ ಲಾಕ್‌ಡೌನ್ ಹೇರಲು ನಿರ್ಧರಿಸಲಾಗಿದೆ.

Last Updated : May 7, 2021, 6:41 PM IST

ABOUT THE AUTHOR

...view details