ಕರ್ನಾಟಕ

karnataka

ETV Bharat / state

ಕೊರೊನಾ ಲಸಿಕೆ: ಪ್ರಧಾನಿ ಜೊತೆ ವಿಡಿಯೋ ಸಂವಾದದಲ್ಲಿ ಭಾಗಿಯಾಗಲಿದ್ದಾರೆ ಸಿಎಂ ಬಿಎಸ್‌ವೈ - Bengaluru News 2021

ಕೊರೊನಾ ಲಸಿಕೆ ಹಂಚಿಕೆ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸೋಮವಾರ ವಿಡಿಯೋ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

PM Modi video conference meeting
ಪ್ರಧಾನಿ ಮೋದಿ ವಿಡಿಯೋ ಸಂವಾದ

By

Published : Jan 8, 2021, 7:17 PM IST

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಲಸಿಕೆ ಹಂಚಿಕೆ ಕುರಿತು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ ಕುರಿತು ಸಿದ್ದತೆ ನಡೆಯುತ್ತಿದ್ದು, ಈ ಸಂಬಂಧ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ವಿಡಿಯೋ ಸಂವಾದದ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆ ಹಂಚಿಕೆ ಕುರಿತು ಸಭೆ ನಡೆಸಲಿದ್ದು, ರಾಜ್ಯಗಳ ಬೇಡಿಕೆ, ಪೂರೈಕೆ, ಲಸಿಕೆ ಕೊಡಲು ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ABOUT THE AUTHOR

...view details