ಕರ್ನಾಟಕ

karnataka

ETV Bharat / state

ಹಂತ ಹಂತವಾಗಿ ಅನುದಾನ, ಪ್ರತಿಭಟನೆ ನಿರ್ಧಾರ ಕೈಬಿಡಿ; ಜೆಡಿಎಸ್ ರಾಜ್ಯಾಧ್ಯಕ್ಷರಿಗೆ‌ ಸಿಎಂ ಪತ್ರ! - ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ

ಸೋಮವಾರ(ಜ.25) ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

CM BSY Write Letter to JDS president HDK
CM BSY Write Letter to JDS president HDK

By

Published : Jan 23, 2021, 12:22 AM IST

ಬೆಂಗಳೂರು:ಕೊರೊನಾ ಲಾಕ್​ಡೌನ್​ ಕಾರಣದಿಂದಾಗಿ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಹಂತದಲ್ಲಿದ್ದು, ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತೇನೆಂದು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಪ್ರತಿಭಟನೆ ನಡೆಸುವ ಕುರಿತು ನೀವೂ ಬರೆದಿರುವ ಪತ್ರ ಗೃಹ ಕಚೇರಿಗೆ ಆಗಮಿಸಿದೆ ಎಂದಿದ್ದಾರೆ.

ಹೆಚ್​ಡಿಕೆಗೆ ಪತ್ರ ಬರೆದ ಮುಖ್ಯಮಂತ್ರಿ

ಪತ್ರದಲ್ಲಿ ಹಾಸನ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಸಂಬಂಧಿಸಿದಂತೆ ಜನವರಿ 25ರ ಸೋಮವಾರದಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ” ಕಚೇರಿಯ ಆವರಣದಲ್ಲಿ ಹಾಸನ ಜಿಲ್ಲೆಯ ಜೆಡಿಎಸ್​ ಶಾಸಕರು ಪ್ರತಿಭಟನೆ ನಡೆಸುವ ಬಗ್ಗೆ ಪ್ರಸ್ತಾಪಿಸಿದ್ದೀರಿ. ತಮಗೆ ತಿಳಿದಿರುವಂತೆ ವಿಶ್ವವ್ಯಾಪಿಯಾಗಿರುವ ಕೋವಿಡ್-19 ಸಾಂಕ್ರಾಮಿಕದಿಂದಾಗಿ ವಿಶ್ವದ ವಿವಿಧ ರಾಷ್ಟ್ರಗಳೂ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ.

ಓದಿ: ಹಣ ಗೋಲ್‌ಮಾಲ್​ ಮಾಡಿದ್ದು ನೀವು, ನಾನಲ್ಲ: ಯೋಗೇಶ್ವರ್​ಗೆ ಹೆಚ್​​ಡಿಕೆ ಟಾಂಗ್​

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್​ಡೌನ್‌ನಿಂದಾಗಿ ಜನರ ಆರ್ಥಿಕತೆಯ ಮೇಲೆ ಉಂಟಾದ ಪರಿಣಾಮ ನಿವಾರಣೆಗೆ ಕರ್ನಾಟಕ ದೇಶದಲ್ಲಿಯೇ ಮಾದರಿಯಾಗಿ ಪರಿಹಾರ ಪ್ಯಾಕೇಜ್​ ನೀಡಿದೆ. ದೇಶದ ವಿವಿಧ ರಾಜ್ಯಗಳು ಸರ್ಕಾರಿ ಸಿಬ್ಬಂದಿಗೆ ವೇತನ ಪಾವತಿಸದಂತಹ ತೀರ್ಮಾನ ತೆಗೆದುಕೊಂಡಿದ್ದರೂ ಸಹ ನಮ್ಮ ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ನೌಕರರ ವೇತನವೂ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನೂ ಪೂರ್ಣ ಪ್ರಮಾಣದಲ್ಲಿ ಪಾವತಿಸಿದೆ.

ಕೋವಿಡ್-19 ನಿಂದಾದ ಆರ್ಥಿಕ ಸಂಕಷ್ಟದ ಮಧ್ಯೆಯೂ ಯಾವುದೇ ಸರ್ಕಾರಿ ಯೋಜನೆಗಳನ್ನು ತಡೆಹಿಡಿಯದೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಸಿಎಂ ಪತ್ರದ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಈಗ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಹಂತದಲ್ಲಿದ್ದು, ಹಾಸನ ಜಿಲ್ಲೆಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಗತ್ಯ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ ವಹಿಸುತ್ತೇನೆ. ಹಾಗಾಗಿ ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಪತ್ರಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಪತ್ರ ಬರೆದು ಮನವಿ ಮಾಡಿದ್ದಾರೆ.

ABOUT THE AUTHOR

...view details