ಕರ್ನಾಟಕ

karnataka

ETV Bharat / state

ಕೊರೊನಾ ಸಂಕಷ್ಟ: ನಾಳೆ ಸರ್ವಪಕ್ಷ ನಾಯಕರ ಸಭೆ ಕರೆದ ಸಿಎಂ - ಸಿಎಂ ಯಡಿಯೂರಪ್ಪ ಸರ್ವ ಪಕ್ಷಗಳ‌ ಸಭೆ

ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂಬಂಧ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಲಾಕ್​​​ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ಜನರ ಹಿತದೃಷ್ಟಿಯಿಂದ ಎಲ್ಲಾ ಪಕ್ಷದ ನಾಯಕರ ಜೊತೆ ಚರ್ಚಿಸಲು ಸಿಎಂ ತೀರ್ಮಾನಿಸಿದ್ದಾರೆ.

ಸಿಎಂ
ಸಿಎಂ

By

Published : Mar 28, 2020, 6:01 PM IST

ಬೆಂಗಳೂರು:ಕೊರೊನಾ ಸಂಕಷ್ಟ ಹಿನ್ನೆಲೆ ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ‌ ಸಭೆ ನಡೆಸಲು ನಿರ್ಧರಿಸಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂಬಂಧ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಲಾಕ್​​ಡೌನ್ ಜಾರಿಯಲ್ಲಿರುವುದರಿಂದ ರಾಜ್ಯದ ಜನರ ಹಿತದೃಷ್ಟಿಯಿಂದ ಎಲ್ಲಾ ಪಕ್ಷದ ನಾಯಕರ ಜೊತೆ ಚರ್ಚಿಸಲು ಸಿಎಂ ತೀರ್ಮಾನಿಸಿದ್ದಾರೆ.

ನಾಳೆ ಸರ್ವಪಕ್ಷ ನಾಯಕರ ಸಭೆ ಕರೆದ ಸಿಎಂ

ಕೋವಿಡ್-19 ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಹಾಗೂ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಸಿಎಂ ಸರ್ವಪಕ್ಷಗಳ ಮುಖಂಡರಿಗೆ ಆಹ್ವಾನ‌ ನೀಡಿದ್ದಾರೆ.

ಕೊರೊನಾ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸರ್ವಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ್ದರು. ಕೊರೊನಾ ಬಗ್ಗೆ ಸರ್ಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸಿಎಂ ಯಡಿಯೂರಪ್ಪ ಸರ್ವಪಕ್ಷ ನಾಯಕರ ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ.

ABOUT THE AUTHOR

...view details