ಬೆಂಗಳೂರು:ಜುಲೈ 26 ರಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿದ್ದು, ಅದಕ್ಕೂ ಮುನ್ನ ಆಯೋಜನೆ ಮಾಡಿದ್ದ ಎರಡು ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರದ್ದುಗೊಳಿಸಿದ್ದಾರೆ. ನಾಯಕತ್ವ ಬದಲಾವಣೆ ಚರ್ಚೆ ಸಂದರ್ಭದಲ್ಲಿ ಸಿಎಂ ಇರಿಸಿರುವ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಜುಲೈ 26 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಸಾಧನಾ ಕಾರ್ಯಕ್ರಮ ನಡೆಯಲಿದೆ. ಸಭೆಗೂ ಮುನ್ನಾದಿನ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದ ಸಿಎಂ ಅಂದು ರಾತ್ರಿಯ ಭೋಜನಕೂಟವನ್ನೂ ಏರ್ಪಡಿಸಿದ್ದರು. ಇದಕ್ಕಾಗಿ ಸಿದ್ದತೆಗಳೂ ನಡೆದಿದ್ದವು. ಆದರೆ, ನಿನ್ನೆ ದಿಢೀರ್ ಬೆಳವಣಿಗೆಯಲ್ಲಿ ಶಾಸಕಾಂಗ ಪಕ್ಷದ ಸಭೆ ರದ್ದುಗೊಳಿಸಿದ್ದ ಸಿಎಂ ಯಡಿಯೂರಪ್ಪ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಮೂಲಕ ಶಾಸಕಾಂಗ ಪಕ್ಷದ ಸಭೆ ಇರುವುದಿಲ್ಲ ಎನ್ನುವ ಮಾಹಿತಿಯನ್ನು ತಲುಪಿಸಿದ್ದರು.