ಬೆಂಗಳೂರು:ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ನ್ಯಾಯಮೂರ್ತಿಗಳನ್ನು ದೇಶ ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ವೈ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನ್ಯಾ.ಮೋಹನ್ ಶಾಂತನಗೌಡರ್ ನಿಧನಕ್ಕೆ ಸಿಎಂ ಸಂತಾಪ - CM condolence message to death of supreme court Judge Shantanu goudar
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ.ಶಾಂತನಗೌಡರ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರು ತೀವ್ರ ಅನಾರೋಗ್ಯದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.