ಬೆಂಗಳೂರು :ನಾಡಿನ ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವೇದ, ಪುರಾಣಗಳ ಕುರಿತ ಅವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯೆ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ.