ಕರ್ನಾಟಕ

karnataka

ETV Bharat / state

ಟಿ.ಎನ್. ಶೇಷನ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ - ಮುಖ್ಯಮಂತ್ರಿ ಸಂತಾಪ

ಭಾರತ ಚುನಾವಣಾ ಆಯೋಗದ ನಿವೃತ್ತ ಚುನಾವಣಾ ಆಯುಕ್ತ ಟಿ. ಎನ್. ಶೇಷನ್ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಬಿ ಎಸ್. ಯಡಿಯೂರಪ್ಪ

By

Published : Nov 11, 2019, 9:55 AM IST

ಬೆಂಗಳೂರು:ಭಾರತ ಚುನಾವಣಾ ಆಯೋಗದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ. ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶೇಷನ್ ಅವರು ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ್ದ ದಿಟ್ಟ ವ್ಯಕ್ತಿ. ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ತಿಳಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details