ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಿಎಂ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ತುರ್ತು ಸಭೆ ನಡೆಸಿದರು.
ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್.ಆಶೋಕ್, ಸುರೇಶ್ ಕುಮಾರ್, ಸಿಎಸ್ ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಮಂಜುನಾಥ್ ಪ್ರಸಾದ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ಏನ್ಮಾಡಬೇಕು?, ತಜ್ಞರು ಕೊಟ್ಟಿರುವ ಸಲಹೆಗಳು, ಚಿಕಿತ್ಸಾ ದರದ ಬಗ್ಗೆ ಖಾಸಗಿ ಆಸ್ಪತ್ರೆಗಳ ನಿಲುವು ಮುಂತಾದುವುಗಳ ಬಗ್ಗೆ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನೈಟ್ ಕರ್ಫ್ಯೂ ವಿಸ್ತರಣೆ, ವೀಕೆಂಡ್ ಕರ್ಫ್ಯೂ ಹೇರಿಕೆ, ಅಂತರ್ ಜಿಲ್ಲಾ ಮತ್ತು ಅಂತರ್ ರಾಜ್ಯ ಸಂಚಾರ ನಿರ್ಬಂಧ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಿದರು. ಕಂಟೈನ್ಮೆಂಟ್ ವಲಯಗಳ ನಿರ್ವಹಣೆ, ಕಟ್ಟುನಿಟ್ಟಿನಲ್ಲಿ ಕಂಟೈನ್ಮೆಂಟ್ ವಲಯದಲದಲ್ಲಿ ಕಠಿಣ ಕ್ರಮ ಜಾರಿ ಬಗ್ಗೆ ಸಿಎಂ ಚರ್ಚೆ ನಡೆಸಲಾಯಿತು.
ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಪೂರ್ಣ ಪ್ರಮಾಣದ ಕೊರೊನಾ ಚಿಕಿತ್ಸೆ ಆರಂಭವಾಗದ ವಿಚಾರವಾಗಿಯೂ ಸಮಾಲೋಚನೆ ನಡೆಸಲಾಗಿದ್ದು,. ಪ್ರಮುಖವಾಗಿ ಬೆಂಗಳೂರಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.