ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ ನಡೆಸಿದ್ದಾರೆ.
ಪಾದರಾಯನಪುರ ಗಲಭೆ ಪ್ರಕರಣ: ಗೃಹ ಇಲಾಖೆ ಜೊತೆ ಸಿಎಂ ತುರ್ತು ಸಭೆ - cm bs Yadiyurappa news '
ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಪಾದರಾಯನಪುರದಲ್ಲಿ ಗಲಭೆಗೆ ಕಾರಣಗಳ ಕುರಿತು ಸಿಎಂ ಮಾಹಿತಿ ಪಡೆದರು. ಕಾನೂನು ಸುವ್ಯವಸ್ಥೆ, ಬಂಧಿತರ ಬಗ್ಗೆ ಮಾಹಿತಿ ಪಡೆದ ಸಿಎಂ, ಗಲಭೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇನ್ನು ಗಲಭೆ ಮರುಕಳಿಸದಂತೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಅವರು, ಉಳಿದ ಪ್ರದೇಶಗಳಲ್ಲೂ ಕಣ್ಗಾವಲು ಇಡಲು ತಾಕೀತು ಮಾಡಿದರು. ಡಿ ಜೆ ಹಳ್ಳಿ, ಕೆ ಜೆ ಹಳ್ಳಿ ಸೇರಿದಂತೆ ಬೇರೆ ಮುಸ್ಲಿಂ ಪ್ರದೇಶಗಳಲ್ಲಿ ಗಲಭೆ ಹಬ್ಬದಂತೆ ಕ್ರಮ ಕೈಗೊಳ್ಳಬೇಕು. ಶಿವಾಜಿನಗರ, ಟ್ಯಾನರಿ ರಸ್ತೆ, ಥಣಿಸಂದ್ರ, ಸಾದಿಕ್ ಪಾಳ್ಯ, ಗೋರಿಪಾಳ್ಯ, ಡಿಜೆ ನಗರ, ಜೆಜೆ ನಗರ ಸೇರಿ ಹಲವೆಡೆ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ ನೀಡಿದರು.