ಬೆಂಗಳೂರು: ಕೊರೊನಾ ಎಫೆಕ್ಟ್ ನಿಂದಾಗಿ ಇದೇ ಮೊದಲ ಬಾರಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕ್ಯಾಬಿನೆಟ್ ಸಭೆ ಮಾಡಲಾಗುತ್ತಿದೆ.
ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡ ಸಿಎಂ..! - ಕೊರೊನಾ ಸುದ್ದಿ
ಕೇಂದ್ರ ಸರ್ಕಾರದ ಮಾದರಿಯಲ್ಲಿ ಮುಖ್ಯಮಂತ್ರಿಗಳು ಮತ್ತು ಸಚಿವರು ಸಾಮಾಜಿಕ ಅಂತರ ಕಾಯ್ದುಕೊಂಡರು. ದೂರ ದೂರ ಕೂತೇ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.

ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡ ಸಿಎಂ..!
ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ ಸಭೆ ಮಾದರಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕ್ಯಾಬಿನೆಟ್ ಸಭೆ ನಡೆಸಿದರು. ಕ್ಯಾಬಿನೆಟ್ ಸಭೆ ಬೇರೆಡೆಗೆ ಸ್ಥಳಾಂತರಿಸಿರುವುದು ವಿಶೇಷವೇನು ಇಲ್ಲ. ಈ ಹಿಂದೆ ತುರ್ತು ಸಂದರ್ಭದಲ್ಲಿ ಸಚಿವ ಸಂಪುಟ ಸಭೆ ಬೇರೆ ಬೇರೆ ಸ್ಥಳಗಳಲ್ಲಿ ನಡೆದಿರುವ ಉದಾಹರಣೆ ಇದೆ.
ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡ ಸಿಎಂ
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ನಡೆಯಬೇಕಿದ್ದ ಸಭೆಯನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ.