ಬೆಂಗಳೂರು: ಬಳ್ಳಾರಿ ಜಿಲ್ಲೆಯ ಪಾಪಿನಾಯಕನಹಳ್ಳಿ ಮತ್ತು ಇತರೆ ಗಣಿಬಾಧಿತ 10 ಗ್ರಾಮಗಳಿಗೆ ತುಂಗ ಭದ್ರಾ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ ಮತ್ತು 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬಳ್ಳಾರಿಯ 10 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಯೋಜನೆಗೆ ಸಿಎಂ ಶಂಕುಸ್ಥಾಪನೆ - Bellary drinking water project
ಕೊರೊನಾ ಹಿನ್ನೆಲೆ ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಳ್ಳದ ಸಿಎಂ ಯಡಿಯೂರಪ್ಪ ವರ್ಚುವಲ್ ಮೂಲಕ ಬಳ್ಳಾರಿ ಜಿಲ್ಲೆಯ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಗ್ರೀನ್ ಸಿಗ್ನಲ್ ಕೊಟ್ಟರು.
ವರ್ಚುಯಲ್ ಮೂಲಕ ಶಾಶ್ವತ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರ ಸಿಎಂ
ಇದನ್ನೂ ಓದಿ:ಎಂದಿಗೂ ಬತ್ತದ ಹರಿಶಂಕರ ತೀರ್ಥದಲ್ಲಿ ಅದಿರು ಮಿಶ್ರಿತ ನೀರು ಪತ್ತೆ: ಭಕ್ತರಲ್ಲಿ ಆತಂಕ..!
ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದರು. ಕೊರೊನಾ ಮುಂಜಾಗ್ರತಾ ಕ್ರಮದ ಕಾರಣದಿಂದಾಗಿ ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಳ್ಳದ ಸಿಎಂ ಯಡಿಯೂರಪ್ಪ ವರ್ಚುವಲ್ ಮೂಲಕ ಭಾಗಿಯಾದರು.