ಬೆಂಗಳೂರು : ರೈತಪರ ಹೋರಾಟದ ವೇಳೆ ದಾಖಲಾಗಿರುವ ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಇಂದು ಸಂಜೆಯೊಳಗೆ ಕೇಸ್ ಗಳನ್ನ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ.
ಸಿಎಂರನ್ನು ಭೇಟಿ ಮಾಡಿದ ರೈತ ಮುಖಂಡರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ರೈತ ಮುಖಂಡರು ರೈತರ ಮೇಲಿನ ಕೇಸ್ಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದರು. ಮುಖಂಡರ ಮನವಿಗೆ ಸ್ಪಂದಿಸಿದ ಸಿಎಂ, ಕೇಸ್ ಗಳನ್ನು ವಾಪಸ್ ಪಡೆಯಲು ನಿರ್ಧರಿಸಿದ್ದು, ಕೇಸ್ ವಾಪಸ್ ಪಡೆಯುವ ಕುರಿತು ಅಗತ್ಯ ಕ್ರಮಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರೈತರ ವಿರುದ್ಧ ಎಷ್ಟು ಪ್ರಕರಣ ದಾಖಲಾಗಿವೆ ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಇಂದು ಸಂಜೆಯೊಳಗೆ ಎಲ್ಲ ಪ್ರಕರಣ ವಾಪಾಸ್ ಪಡೆಯುತ್ತೇವೆ ಎಂದು ಭರವಸೆ ನೀಡಿದರು.
ಕುರುಬೂರು ಶಾಂತಕುಮಾರ್, ರೈತ ಮುಖಂಡ ಸಿಎಂ ಭೇಟಿ ಬಳಿಕ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್, ರೈತರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದೇವೆ ಅವರು ಕೇಸ್ ವಾಪಸ್ ಪಡೆಯುವುದಾಗಿ ಭರವಸೆ ಕೊಟ್ಟಿದ್ದಾರೆ. ಅಲ್ಲದೇ ಯಾವ ಯಾವ ಹೋರಾಟದಲ್ಲಿ ಎಷ್ಟೆಷ್ಟು ಪ್ರಕರಣ ದಾಖಲಾಗಿದೆ ಅವುಗಳ ಫೈಲ್ ಗಳನ್ನು ತರಿಸಿಕೊಂಡು ಕ್ಲಿಯರ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.