ಕರ್ನಾಟಕ

karnataka

ETV Bharat / state

ಬಿಜೆಪಿ ಟ್ವೀಟ್​ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು - Ravi Poojari

ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿರುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯೊಂದನ್ನು ನೀಡುವ ಮೂಲಕ ಇದೀಗ ಪ್ರತಿಪಕ್ಷದ ಗಾಳಕ್ಕೆ ಸಿಲುಕಿಕೊಂಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ

By

Published : Feb 2, 2019, 1:26 PM IST

ಮೈಸೂರು: ಶಾಸಕ ಕಂಪ್ಲಿ ಗಣೇಶ್​ರನ್ನು ಬಂಧಿಸುವಂತೆ ಆದೇಶ ನೀಡಲಾಗಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಟ್ವೀಟ್​ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇಂದು ಸುತ್ತೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದೆ. ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ, ಈಗಾಗಲೇ ಕಂಪ್ಲಿ ಶಾಸಕರನ್ನು ಬಂಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಒಳ್ಳೆಯ ಸುದ್ದಿಯನ್ನು ನೀಡಲಾಗುವುದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಕೇಂದ್ರ ಸರ್ಕಾರದ ನಿನ್ನೆಯ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶಾದಾಯಕವಾಗಿದೆ. ಯಾವುದೇ ಯೋಜನೆಗಳನ್ನು ಕರ್ನಾಟಕಕ್ಕೆ ನೀಡಿಲ್ಲ. ರಾಜ್ಯದ ಯೋಜನೆಗಳನ್ನೇ ನಮ್ಮದು ಎಂದು ಕೇಂದ್ರ ಸರ್ಕಾರ ಬಿಂಬಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ, ರೈತರ ಖಾತೆಗೆ ಹಣ ವರ್ಗಾವಣೆ ಬಗ್ಗೆ ವ್ಯಂಗ್ಯವಾಡಿದರು. ಇನ್ನು ಆದಾಯ ತೆರಿಗೆ ಮಿತಿ ಏರಿಕೆ ಜನರಿಗೆ ದೋಖಾ ಎಂದೂ ಹೇಳಿದರು.

ABOUT THE AUTHOR

...view details