ಬೆಂಗಳೂರು/ನವದೆಹಲಿ:ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.
ಕೃಷ್ಣಾ ನದಿಗೆ ನೀರು ಬಿಡುಗಡೆ ವಿಚಾರ: ಮಹಾರಾಷ್ಟ್ರ ಸಿಎಂ ಸಹಕಾರದ ಭರವಸೆ - ಸಿಎಂ
ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಹರಿಸುವ ಕುರಿತು ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಸಮಾಲೋಚಿಸಿದ್ದಾರೆ.

ಕೃಷ್ಣಾ ನದಿಗೆ ನೀರು ಬಿಡುಗಡೆ ವಿಚಾರ : ಸಕಾರಾತ್ಮಕವಾಗಿ ಸ್ಪಂದಿಸಿದ ಫಡ್ನವಿಸ್
ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಜೊತೆಯಲ್ಲೇ ಕುಳಿತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರೊಂದಿಗೆ ಈ ಕುರಿತು ಸಿಎಂ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಫಡ್ನವಿಸ್, ಈ ಬಗ್ಗೆ ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
TAGGED:
ಸಿಎಂ