ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳಲ್ಲಿ ಕೆಲವೊಂದು ಸಲಹೆ ಸೂಚನೆಗಳು ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗರಂ ಆಗಿದ್ದಾರೆ. ಈಗಲೇ ಹೀಗಾದರೆ ಲಾಕ್ ಡೌನ್ ವೇಳೆ ಏನಾಗಬಹುದು ಎಂದು ಲಾಕ್ ಡೌನ್ ಆರಂಭಕ್ಕೂ ಮುನ್ನ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.
ನಿನ್ನೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ವೇಳೆ ಸಿಎಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಈಗಾಗಲೇ ಆ್ಯಂಬುಲೆನ್ಸ್ ಖರೀದಿಸುವುದಕ್ಕೆ ಸರ್ಕಾರ ಸೂಚನೆ ಕೊಟ್ಟಿದೆ. ಹೀಗಿದ್ದು ಆ್ಯಂಬುಲೆನ್ಸ್ ಸಮಸ್ಯೆ ಯಾಕೆ ಆಗುತ್ತಿದೆ? ಮಾಧ್ಯಮಗಳಲ್ಲಿ ಕೋವಿಡ್ ಸೋಂಕಿತರಿಗೆ ಇನ್ನೂ ಬೆಡ್ಗಳು ಸಿಗುತ್ತಿಲ್ಲ ಎನ್ನುವ ವರದಿಗಳು ಬರುತ್ತಿವೆ. ಹಾಗಿದ್ದರೆ ಖಾಸಗಿ ಆಸ್ಪತ್ರೆಗಳ ಬೆಡ್ ಎಲ್ಲಿ ಹೋಯ್ತು? ಬೆಡ್ ಗಳ ಹಂಚಕೆಗೆ ಕೇಂದ್ರಿಕೃತ ವ್ಯವಸ್ಥೆ ಆಗಲಿಲ್ವಾ ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು.
ಮೆಡಿಕಲ್ ಉಪಕರಣ ಖರೀದಿಸುವ ಮುನ್ನ ಎಚ್ಚರವಹಿಸಬೇಕು. ದುಬಾರಿ ಬೆಲೆ ಕೊಟ್ಟು ಯಾಕೆ ಖರೀದಿಸುತ್ತಿದ್ದೀರಾ ? ಇದನ್ನೇ ಪ್ರತಿಪಕ್ಷಗಳು ಪ್ರಶ್ನೆ ಮಾಡುತ್ತಿರುವುದು. ಖರ್ಚು ಜಾಸ್ತಿಯಾಗುತ್ತಿದೆ, ಸಮಸ್ಯೆಗಳು ಸಹ ನಿಲ್ಲುತ್ತಿಲ್ಲ. ಈ ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಬಿಎಸ್ವೈ ತಾಕೀತು ಮಾಡಿದರು.
ಲಾಕ್ಡೌನ್ ಆರಂಭಕ್ಕೂ ಮುನ್ನ ಅಧಿಕಾರಿಗಳಿಗೆ ಸಿಎಂ ಕ್ಲಾಸ್: ಸಮಸ್ಯೆಗಳ ಪರಿಹಾರಕ್ಕೆ ತಾಕೀತು - ಬೆಂಗಳೂರು
ಲಾಕ್ ಡೌನ್ ಆರಂಭಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಕೊರೊನಾ ಮುಂಜಾಗ್ರತಾ ಕ್ರಮಗಳಲ್ಲಿ ಕೆಲವೊಂದು ಸಲಹೆ ಸೂಚನೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳನ್ನು ತರಾಟೆ ತಗೆದುಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ನಾಳೆಯಿಂದ ಜುಲೈ 22 ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.