ಬೆಂಗಳೂರು : ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಯಿತು.
ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ
ಅರಣ್ಯ ಇಲಾಖೆ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಶೀಲನಾ ಸಭೆ ನಡೆಸಿದರು.
ಮೊದಲು ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಿಎಸ್ವೈ ಅಧಿಕಾರಿಗಳ ಬಳಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ, ರೈತರ ಬೆಳೆಗಳು, ಸಾಲ ವಿತರಣೆ ವ್ಯವಸ್ಥೆ ಬಗ್ಗೆ ಮಾಹಿತಿ ಕಲೆ ಕಲೆಹಾಕಿದರು.
ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ಪರಿಹಾರದ ಹಣ ಸಂಬಂಧಪಟ್ಟವರಿಗೆ ಸರಿಯಾಗಿ ತಲುಪಬೇಕು. ಅಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಹೋಗಿ ಪರಿಹಾರದ ಚೆಕ್ ತಲುಪಿಸಬೇಕೆಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.