ಬೆಂಗಳೂರು: ಬಜೆಟ್ ಪೂರ್ವ ಸಭೆ ಮುಂದುವರೆದಿದ್ದು, ಇಂದೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಳಾಡಳಿತ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಇತರ ಇಲಾಖೆಗಳ ಸಭೆ ನಡೆಸಿದರು.
ಆರು ಇಲಾಖೆಯೊಂದಿಗೆ ಸಭೆ ನಡೆಸಿ ಇಲಾಖಾವಾರು ಪ್ರಸ್ತಾವನೆ ಮತ್ತು ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಆಲಿಸಿದ್ದಾರೆ. ಕಳೆದ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನದ ಬಳಕೆ ವಿವರ ಹಾಗೂ ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ತೋಟಗಾರಿಕಾ ಸಚಿವ ಮುನಿರತ್ನ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ವಿವರಣೆ ನೀಡಿದ್ದಾರೆ.
ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಒಳಾಡಳಿತ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ತೋಟಗಾರಿಕೆ, ರೇಷ್ಮೆ ಸೇರಿ ಇತರೆ ಇಲಾಖೆಗಳ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ ಪಿಯುಸಿ, ಪದವಿ ತರಗತಿಗಳು ಆರಂಭ
ಇದೇ ವೇಳೆ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಪ್ರಕಟಿಸಿರುವ ಕರ್ನಾಟಕ ಅಂಕಿ- ಅಂಶ ಗಳ ನೋಟ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ಯೋಜನೆ, ತೋಟಗಾರಿಕೆ ಸಚಿವ ಮುನಿರತ್ನ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.