ಬೆಂಗಳೂರು: ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ಸವಾಲು ಹಾಕಿದರು. ಜೆಡಿಎಸ್ ಕಚೇರಿ ಜೆ ಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿಯವರು ಕೂಡ ಸಿಎಂ ಅಭ್ಯರ್ಥಿ ಯಾರು ಎಂದು ಹೇಳಿಲ್ಲ. ನಾವು ಹೆಚ್.ಡಿ. ಕುಮಾರಸ್ವಾಮಿಯವರು ನಮ್ಮ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇವೆ. ನಿಮಗೆ ತಾಕತ್ ಇದ್ದರೆ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡಿ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯನವರ ಕಾರ್ಯಕ್ರಮ ಹಾಳು ಮಾಡಲು ಜೆಡಿಎಸ್ನಿಂದ ಹುನ್ನಾರ ನಡೆಸಿದ್ದಾರೆ ಅಂತಾ ಕೆಲವರು ಆರೋಪ ಮಾಡುತ್ತಿದ್ದಾರೆ. ಜನತಾ ದಳ ಅಸ್ತಿತ್ವದಲ್ಲಿ ಇಲ್ಲ ಅಂತೀರಿ. ಹಾಗಾದರೆ ನಮ್ಮ ಮೇಲೆ ಭಯ ಯಾಕೆ ಎಂದು ಪ್ರಶ್ನಿಸಿದ ಅವರು, ದೇವೇಗೌಡರ ಬಗ್ಗೆ ಮಾತನಾಡಿರುವ ರಾಜಣ್ಣನವರು ಕ್ಷಮೆ ಕೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ, ಅವರು ಉಲ್ಟಾ ಮಾತನಾಡಿದ್ದಾರೆ. ರಾಜಣ್ಣನವರು ಕ್ಷಮೆ ಕೇಳಬೇಕು. ಏನಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ನಾವು ಹೊಣೆಯಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮುಖಂಡ ರಾಜಣ್ಣಗೆ ಇಬ್ರಾಹಿಂ ಎಚ್ಚರಿಸಿದರು.