ಕರ್ನಾಟಕ

karnataka

ETV Bharat / state

ಜೆಡಿಎಸ್‌ನಿಂದ ಉಚ್ಚಾಟನೆ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಸಿಎಂ ಇಬ್ರಾಹಿಂ - ಇಬ್ರಾಹಿಂ ದಾವೆ

ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ವಿಧಾನಪರಿಷತ್ ಮಾಜಿ​ ಸದಸ್ಯ ಸಿಎಂ ಇಬ್ರಾಹಿಂ ಕೋರ್ಟ್​ ಮೊರೆ ಹೋಗಿದ್ದಾರೆ.

cm-ibrahim-went-to-court-questing-his-expel-from-jds-party
ಜೆಡಿಎಸ್‌ನಿಂದ ಉಚ್ಚಾಟನೆ ಪ್ರಶ್ನಿಸಿ ಸಿಎಂ ಇಬ್ರಾಹಿಂ ಕೋರ್ಟ್​ ಮೊರೆ

By ETV Bharat Karnataka Team

Published : Dec 21, 2023, 10:44 PM IST

ಬೆಂಗಳೂರು:ಜೆಡಿಎಸ್ ಪಕ್ಷದ ಉಚ್ಚಾಟಿತ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ. ರಾಜ್ಯಾಧ್ಯಕ್ಷ ಸೇರಿದಂತೆ ರಾಜ್ಯ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿ 2023ರ ಅಕ್ಟೋಬರ್​ 19ರಂದು ತೆಗೆದುಕೊಂಡ ನಿರ್ಣಯ ಹಾಗೂ ಅದೇ ದಿನ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಹಾಗೂ ತಮ್ಮನ್ನು ಅಮಾನತುಗೊಳಿಸಿ ನವೆಂಬರ್​ 16ರಂದು ಕೈಗೊಂಡ ನಿರ್ಣಯವನ್ನು ಇಬ್ರಾಹಿಂ ಪ್ರಶ್ನಿಸಿದ್ದಾರೆ.

ಅರ್ಜಿಯಲ್ಲಿ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ. ಜೆಡಿಎಸ್ ಕೈಗೊಂಡ ಈ ಎಲ್ಲಾ ನಿರ್ಣಯಗಳು ಏಕಪಕ್ಷೀಯ ಹಾಗೂ ಕಾನೂನುಬಾಹಿರವಾಗಿವೆ. ಪಕ್ಷದ ಸಂವಿಧಾನ ಮತ್ತು ಸಹಜ ನ್ಯಾಯತತ್ವಕ್ಕೆ ವಿರುದ್ಧವಾಗಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

ಒಂದೇ ದಿನ 60 ಪ್ರಕರಣಗಳ ಆದೇಶ ಪ್ರಕಟಿಸಿದ ನ್ಯಾ.ಎಂ.ನಾಗಪ್ರಸನ್ನ:ಶಾಸಕ ಕೊತ್ತನೂರು ಮಂಜುನಾಥ್, ಎಂಎಲ್‌ಸಿ ಸೂರಜ್ ರೇವಣ್ಣ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವೂ ಸೇರಿದಂತೆ ಹಲವು ಜನಪ್ರತಿನಿಧಿಗಳ ಸೇರಿದಂತೆ ಒಟ್ಟು 50 ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ತೀರ್ಪು ಪ್ರಕಟಿಸಿದ್ದಾರೆ.

ಸದ್ಯ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಅವರು ಗುರುವಾರ ಒಂದೇ ದಿನ ಈ ಮೊದಲೇ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ 50 ಪ್ರಮುಖ ಪ್ರಕರಣಗಳಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಕಳೆದ ವರ್ಷ ಒಡಿಶಾ ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರು ಒಂದೇ 32 ತೀರ್ಪು ಪ್ರಕಟಿಸಿದ್ದರು. ಈ ವರ್ಷ ಜೂನ್ ತಿಂಗಳಲ್ಲಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರು 65 ತೀರ್ಪುಗಳನ್ನು ಒಂದೇ ದಿನ ಪ್ರಕಟಿಸಿದ್ದರು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯೊಬ್ಬರು ಕೂಡ ಕಳೆದ ವರ್ಷ ಒಂದೇ ದಿನ 20 ತೀರ್ಪು ಪ್ರಕಟಿಸಿದ್ದು ಇಲ್ಲಿ ಉಲ್ಲೇಖಾರ್ಹ.

ABOUT THE AUTHOR

...view details