ಬೆಂಗಳೂರು:ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಹೊಸ ಕಟ್ಟಡವನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದಾರೆ.
ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಹೊಸ ಕಟ್ಟಡ ಉದ್ಘಾಟಿಸಿದ ಸಿಎಂ ಬಿಎಸ್ವೈ - ಕರ್ನಾಟಕ ನ್ಯಾಯಾಂಗ ಅಕಾಡೆಮಿ
ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ರಾಜ್ಯ ನ್ಯಾಯಾಂಗ ಅಕಾಡೆಮಿಯ ಆವರಣದಲ್ಲಿರುವ ನೂತನ ಕಟ್ಟಡವನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.
![ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಹೊಸ ಕಟ್ಟಡ ಉದ್ಘಾಟಿಸಿದ ಸಿಎಂ ಬಿಎಸ್ವೈ Karnataka Judicial Academy](https://etvbharatimages.akamaized.net/etvbharat/prod-images/768-512-5672744-thumbnail-3x2-chai.jpg)
ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ರಾಜ್ಯ ನ್ಯಾಯಾಂಗ ಅಕಾಡೆಮಿಯ ಆವರಣದಲ್ಲಿರುವ ಈ ನೂತನ ಕಟ್ಟಡವನ್ನು ಇಂದು ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಇನ್ನು ಈ ಕಾರ್ಯಕ್ರಮಕ್ಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಮೋಹನ್, ಶಾಂತನಗೌಡರ್, ನ್ಯಾಯಮೂರ್ತಿ ಅಬ್ದುಲ್ ನಜೀರ್, ಡಿಸಿಎಂ ಗೋವಿಂದ ಕಾರಜೋಳ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಲಾಯಿತು. ನಂತರ ಮುಖ್ಯಮಂತ್ರಿ ಹಾಗೂ ಸಚಿವರು ನ್ಯಾಯಮೂರ್ತಿಗಳ ಜೊತೆ ಚಹಾ ಕೂಟದಲ್ಲಿ ಭಾಗಿಯಾದರು.