ಕರ್ನಾಟಕ

karnataka

ETV Bharat / state

ಬಿಬಿಎಂಪಿಯಿಂದ ನಿರ್ಮಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಉದ್ಘಾಟಿಸಿದ ಸಿಎಂ - ರಾಜ್ಯದಲ್ಲಿ ಶಿಕ್ಷಣ ನೀತಿಯನ್ನು ಅನುಷ್ಠಾನ

ಬಿಬಿಎಂಪಿಯಿಂದ ನಿರ್ಮಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಭವನವನ್ನು ಸಿಎಂ ಉದ್ಘಾಟಿಸಿದ್ದಾರೆ. 1,23,00,473 ರೂ. ವೆಚ್ಚದಲ್ಲಿ ಈ ಭವನವನ್ನು ನಿರ್ಮಿಸಲಾಗಿದೆ. ಕಟ್ಟಡದಲ್ಲಿ ಜ್ಞಾನ ಕೇಂದ್ರ, ಗ್ರಂಥಾಲಯ, ಕಂಪ್ಯೂಟರ್ ತರಗತಿ, ಯೋಗ ತರಬೇತಿ, ಸಭೆ ನಡೆಯುವ ಸಭಾಂಗಣಗಳಿವೆ. ಪಾಲಿಕೆಯ 150 ಶಾಲಾ-ಕಾಲೇಜುಗಳಲ್ಲಿ ಸ್ಕೌಟ್ಸ್-ಗೈಡ್ಸ್ ಇದೆ.

ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಉದ್ಘಾಟಿಸಿದ ಸಿಎಂ

By

Published : Jan 12, 2021, 1:11 PM IST

ಬೆಂಗಳೂರು : ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಕೇಂದ್ರ ಕಚೇರಿ ಆವರಣದಲ್ಲಿ ಬಿಬಿಎಂಪಿ ನಿರ್ಮಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಭವನವನ್ನು ಸಿಎಂ ಬಿ.ಎಸ್.‌ಯಡಿಯೂರಪ್ಪ ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ 158 ನೇ ಜಯಂತಿಯನ್ನು ಆಚರಿಸಲಾಯಿತು.

ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಉದ್ಘಾಟಿಸಿದ ಸಿಎಂ

1,23,00,473 ರೂ. ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ. ಕಟ್ಟಡದಲ್ಲಿ ಜ್ಞಾನ ಕೇಂದ್ರ, ಗ್ರಂಥಾಲಯ, ಕಂಪ್ಯೂಟರ್ ತರಗತಿ, ಯೋಗ ತರಬೇತಿ, ಸಭೆ ನಡೆಯುವ ಸಭಾಂಗಣಗಳಿವೆ. ಪಾಲಿಕೆಯ 150 ಶಾಲಾ-ಕಾಲೇಜುಗಳಲ್ಲಿ ಸ್ಕೌಟ್ಸ್-ಗೈಡ್ಸ್ ಇದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಸ್ಕೌಟ್ ಗೈಡ್ಸ್ ವತಿಯಿಂದ 36 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸ್ವಾಮಿ ವಿವೇಕಾನಂದರು ಯುವ ಜನಾಂಗಕ್ಕೆ ಸ್ಫೂರ್ತಿ ಎಂದು ಬಣ್ಣಿಸಿದರು. ಸಮರ್ಥ ಹಾಗೂ ಸಮೃದ್ಧ ಭಾರತದ ನಿರ್ಮಾಣಕ್ಕೆ ನೂತನ ರಾಷ್ಟ್ರೀಯ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಅಲ್ಲದೆ ಪ್ರಧಾನಿ ಮೋದಿಯವರು, ಉನ್ನತ, ಗುಣಮಟ್ಟ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು, ರಾಜ್ಯದಲ್ಲಿ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಬಳಿಕ ಮಾತನಾಡಿದ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ವಿವೇಕಾನಂದರು ಅಲ್ಪ ಅವಧಿಯಲ್ಲಿ ವಿಶ್ವದಲ್ಲೇ ಹೆಸರು ಮಾಡಿದರು. ಅವರ ಜಯಂತಿಯಂದೇ ಕಟ್ಟಡ ಉದ್ಘಾಟನೆ ಮಾಡಲಾಗಿದೆ. ‘ಸ್ಕೂಲ್ ಬೆಲ್’ ಹೆಸರಿನ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನಗಳನ್ನು ಕೊಡಲಾಗುವುದು. ಯಾವುದೇ ಸಹಾಯ ಬೇಕಿದ್ದರೂ ಮಾಡಲು ಪಾಲಿಕೆ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ವಿಶೇಷ ಆಯುಕ್ತರಾದ ರಂದೀಪ್ ಮಾತನಾಡಿ, ಸ್ವಾಮಿ ವಿವೇಕಾನಂದರ ಮಾತು, ವಿಚಾರಧಾರೆಗಳನ್ನು ಮರೆತು ಬಿಡಬಾರದು. ವಿದ್ಯಾರ್ಥಿಗಳು ವಿವೇಕಾನಂದರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಬೇಕು. ಇದರಿಂದ ದೇಶ ಪ್ರಗತಿಯ ಪಥದಲ್ಲಿ ಸಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ರಾಜ್ಯ ಸ್ಕೌಟ್ ಗೈಡ್ಸ್ ಆಯುಕ್ತರಾದ ಪಿಜಿಆರ್ ಸಿಂಧ್ಯಾ, ವಿಶೇಷ ಆಯುಕ್ತರಾದ ಜೆ.ಮಂಜುನಾಥ್ ಉಪಸ್ಥಿತರಿದ್ದರು.

ABOUT THE AUTHOR

...view details