ಬೆಂಗಳೂರು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಾಬು ಜಗಜೀವನ್ ರಾಂ ಪುಣ್ಯತಿಥಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆಯಿಂದ ಕೆಲ ಕಡೆಗಳಲ್ಲಿ ಹಾನಿಯಾಗಿದೆ. ಡಿಸಿಗಳ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ತುರ್ತು ಗಮನ ಹರಿಸಿ ಪರಿಹಾರ ಕಾರ್ಯ ನಡೆಸಲು ಅಗತ್ಯ ಸೂಚನೆ ನೀಡಿದ್ದೇನೆ ಎಂದರು.