ಬೆಂಗಳೂರು:ನೆರೆಹಾನಿ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಸೌಲಭ್ಯ ಕಲ್ಪಿಸಲು ಸರ್ಕಾರದ ನೆರವು ಕೊಡಿಸಲು ಯಾರಾದರೂ ಕಮಿಷನ್ ಅಥವಾ ಲಂಚ ಪಡೆದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೆಲ ಗ್ರಾಮ ಪಂಚಾಯತ್ ಸದಸ್ಯರು, ರಾಜಕೀಯ ಪಕ್ಷಗಳ ಕೆಲವು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕಮಿಷನ್ ಪಡೆಯುತ್ತಿರುವ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ. ದೂರವಾಣಿ ಮೂಲಕ ಮಾತನಾಡಿ ಸಂತ್ರಸ್ತರು ಇನ್ನೂ ನರಳುವಂತೆ ಮಾಡಬೇಡಿ. ಸರ್ಕಾರದ ಪರಿಹಾರ ಯಾವುದೇ ತೊಡಕಿಲ್ಲದೇ ಸಂತ್ರಸ್ತರಿಗೆ ತಲುಪುವಂತಾಗಲಿ ಎಂದು ಡಿಸಿಗಳಿಗೆ ಖಡಕ್ ಆಗಿ ಹೇಳಿದ್ದಾರೆ.