ಬೆಂಗಳೂರು: ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿಯನ್ನು ಫ್ರಂಟ್‌ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೊರೊನಾ ಲಸಿಕೆ ನೀಡುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಪತ್ರಕರ್ತರು ಮತ್ತು ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕೋವಿಡ್ ಫ್ರಂಟ್‌ಲೈನ್ ವಾರಿಯರ್ ಎಂದು ಪರಿಗಣಿಸಬೇಕು. ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕೂಡಲೇ ಸೂಕ್ತ ಆದೇಶ ಹೊರಡಿಸಿ ಅನುಷ್ಠಾನಗೊಳಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಿಎಂ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ಗೆ ಸೂಚಿಸಿದ್ದಾರೆ.