ಬೆಂಗಳೂರು: ಮತ್ತೆ ಎರಡು ವಾರ ಲಾಕ್ ಡೌನ್ ಮುಂದುವರೆಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಿದರು.
ಲಾಕ್ಡೌನ್ ವಿಸ್ತರಣೆ: ಮಾರ್ಗಸೂಚಿ ಕುರಿತು ವಿಸ್ತೃತ ವರದಿ ನೀಡಲು ಸಿಎಸ್ಗೆ ಸಿಎಂ ಸೂಚನೆ - ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್
ಲಾಕ್ ಡೌನ್ ಮುಂದುವರೆಸಿರುವ ಹಿನ್ನೆಲೆ ಮಾರ್ಗಸೂಚಿ ಯಾವ ರೀತಿ ಇರಬೇಕು ಎನ್ನುವ ಕುರಿತು ವಿಸ್ತೃತ ವರದಿ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ
ವಿಜಯ ಭಾಸ್ಕರ್ ಅವರಿಗೆ ದೂರವಾಣಿ ಕರೆ ಮಾಡಿದ ಸಿಎಂ ಬಿಎಸ್ವೈ, ಲಾಕ್ಡೌನ್ ಮುಂದುವರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವ ರೀತಿ ನಿರ್ಧಾರ ಕೈಗೊಳ್ಳಬೇಕು? ಯಾವೆಲ್ಲಾ ಅಂಶಗಳನ್ನು ಮುಂದುವರೆಸಬೇಕು? ಮಾರ್ಗಸೂಚಿ ಯಾವ ರೀತಿ ಇರಬೇಕು ಎನ್ನುವ ಕುರಿತು ವಿಸ್ತೃತ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.
ನಾಳೆ ಮಧ್ಯಾಹ್ನ ರಾಜ್ಯದ ಮಾರ್ಗಸೂಚಿ ಕುರಿತು ವರದಿ ನೀಡುವಂತೆ ಸಿಎಂ ಸೂಚನೆ ನೀಡಿದ್ದು, ನಾಳೆ ಸಂಜೆ ವೇಳೆಗೆ ರಾಜ್ಯದ ಲಾಕ್ಡೌನ್ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ.