ಕರ್ನಾಟಕ

karnataka

ETV Bharat / state

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ: ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಿಎಂ ಸೂಚನೆ - Reservation Issue for the Panchamasaali Community

ಇಂದಿನ ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಜಯಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

cm-instructs-to-conduct-study-and-submit-report-of-panchamasali-community-reservation
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Feb 5, 2021, 9:58 PM IST

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಿಎಂ ಸೂಚನೆ
ಸದನದಲ್ಲಿ ಹೇಳಿಕೆ ನೀಡುವಾಗ ಮೀಸಲಾತಿ ನೀಡುವ ನಿರ್ಧಾರ ಏಕಾಏಕಿ ಕೈಗೊಳ್ಳಲು ಸಾಧ್ಯವಿಲ್ಲ. ಕೇಂದ್ರದ ಜೊತೆಗೂ‌ ಚರ್ಚೆ ನಡೆಸಬೇಕು ಎನ್ನುವ ಹೇಳಿಕೆ ನೀಡಿದ್ದ ಸಿಎಂ, ಸ್ವಾಮೀಜಿ ಹಾಗೂ ಸಮುದಾಯದ ವಿರೋಧ ಕಟ್ಟಿಕೊಳ್ಳುವುದರಿಂದ ಪಾರಾಗಲು ಮೀಸಲಾತಿ ನೀಡುವ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಹೋರಾಟಗಾರರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಸಿಎಂ ಸ್ಪಷ್ಟೀಕರಣ: ಇಂದಿನ ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಜಯಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆ
ಲಿಂಗಾಯಿತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ನಾನು ಈಗಾಗಲೇ ಸಮಾಜದ ಮುರುಗೇಶ ನಿರಾಣಿ, ಸಿ.ಸಿ.ಪಾಟೀಲರೊಳಗೊಂಡಂತೆ ಹಲವಾರು ಶಾಸಕರುಗಳ ಜೊತೆ ಚರ್ಚೆ ಮಾಡಿದ್ದೇನೆ. ಸಮಾಜದ ಇಬ್ಬರು ಸ್ವಾಮೀಜಿಯವರನ್ನು ಹಾಗೂ ಸಮಾಜದ ಮುಖಂಡರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಮನವರಿಕೆ ಮಾಡಲು ಕಳುಹಿಸಿಕೊಟ್ಟಿದ್ದೆ. ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗೆ ಸೇರಿಸಲು, ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ವಿಷಯವನ್ನು ಕೊಟ್ಟು ಅಧ್ಯಯನ ಮಾಡಿ, ವರದಿ ಸಲ್ಲಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಓದಿ:ನಾಳೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ: ಎಲ್ಲೆಲ್ಲಿ ರೈತರ ಪ್ರೊಟೆಸ್ಟ್!?

ನಾನು ಇಂದಿನ ಅಧಿವೇಶನದಲ್ಲಿ ಕೇವಲ ಹೇಳಿದ್ದಿಷ್ಟು. ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ ಸಂಸತ್ ಸದಸ್ಯರ ಜೊತೆ ಚರ್ಚಿಸಿ ಮುಂದೆ ರಾಷ್ಟ್ರೀಯ ನಾಯಕರೊಂದಿಗೆ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸಿರುವುದನ್ನು ಈ ಸಂದರ್ಭದಲ್ಲಿ ನನೆಪಿಸಿಕೊಳ್ಳಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲಾ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂತಹ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕಾಗುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details