ಕರ್ನಾಟಕ

karnataka

ETV Bharat / state

ಅಮರನಾಥ ಯಾತ್ರೆಯಲ್ಲಿ ಹವಾಮಾನ ವೈಪರೀತ್ಯ.. ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು; ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ - CM instructs to protect Kannadigas

ಹವಾಮಾನ ವೈಪರೀತ್ಯ ಹಿನ್ನೆಲೆ ಅಮರನಾಥ ಯಾತ್ರೆಗೆ ತೆರಳಿರುವ ರಾಜ್ಯದ ಒಟ್ಟು 80 ಮಂದಿ ಕನ್ನಡಿಗರು ಸಿಲುಕಿದ್ದು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಸಿಎಂ ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

CM instructs protect Kannadigas
CM instructs protect Kannadigas

By

Published : Jul 8, 2023, 9:23 PM IST

ಬೆಂಗಳೂರು:ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯ ಎಲ್ಲ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ.ಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್​​ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜೈನಮುನಿ ಹತ್ಯೆ ಪ್ರಕರಣದ ಸಮಗ್ರ ತನಿಖೆ: ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ಸಿಎಂ ನೀಡಿದ್ದಾರೆ.

ಇದನ್ನೂ ಓದಿ:ಜೈನಮನಿ ದೇಹ ಕೊಳವೆ ಬಾವಿಯಲ್ಲಿ ಪತ್ತೆ: 9 ಭಾಗಗಳಾಗಿ ತುಂಡರಿಸಿ ಎಸೆದ ಹಂತಕರು!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಜೈನ ಆಶ್ರಮದ ಶ್ರೀ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಜುಲೈ 6 ರಂದು ನಾಪತ್ತೆ ಆಗಿದ್ದರು. ಎರಡು ದಿನದ ಬಳಿಕ ಅವರ ದೇಹ ಕೊಳವೆ ಬಾವಿಯಲ್ಲಿ ತುಂಡು ತುಂಡಾಗಿ ಶವವಾಗಿ ಪತ್ತೆಯಾಗಿದೆ. ರಾಯಬಾಗ ತಾಲೂಕಿನ ಕಡಕಬಾವಿ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ದೇಹ ಪತ್ತೆಯಾಗಿದ್ದು, ಹಂತಕರು ದೇಹವನ್ನು ಹಲವು ಭಾಗಗಳಾಗಿ ಕತ್ತರಿಸಿ ಕೊಳವೆ ಬಾವಿಯಲ್ಲಿ ಎಸಗಿದ್ದಾರೆ. ಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬ್ರಾಂಡ್ ಬೆಂಗಳೂರು ಬಗ್ಗೆ ಸಮಾಲೋಚನೆ: ಬ್ರಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಹಲವು ಗಣ್ಯರು ಸಮಾಲೋಚನೆ ನಡೆಸಿದರು. ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಇಂದು ನಿವೃತ್ತ ಐಎಎಸ್ ಅಧಿಕಾರಿ ಡಿ.ವಿ.ಪ್ರಸಾದ್ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮೊದಲಿಗೆ ನಿವೃತ್ತ ಐಎಎಸ್ ಅಧಿಕಾರಿ ಡಿ ವಿ ಪ್ರಸಾದ್ ಅವರು ಡಿಸಿಎಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ನಂತರ ಇ ಸ್ಮಾರ್ಟ್ ಎನರ್ಜಿ ಸಲ್ಯೂಷನ್ಸ್ ಸಂಸ್ಥೆಯ ಸಿಇಒ ಆನಂದ ರಾಯ್, ಕಾರ್ಯನಿರ್ವಾಹಕ ನಿರ್ದೇಶಕ ನೀಲಕಂಠ ಅಯ್ಯರ್, ನಿರ್ದೇಶಕರಾದ ಧರ್ಮೇಶ್, ಎಸ್ ಸ್ಟೀವ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಬಳಿಕ ಮೈಸೂರು ವಿವಿ ಮಾಜಿ ಕುಲಪತಿ ಪ್ರೊ ರಂಗಪ್ಪ, ಡಾ ರಾಮೇಗೌಡ ಮತ್ತು ಪ್ರೊ ಗಂಗಾಧರ್, ಖ್ಯಾತ ಉದ್ಯಮಿ, ಇನ್ಫೋಸಿಸ್ ಸಹ ಸ್ಥಾಪಕ, ಭಾರತೀಯ ಕೈಗಾರಿಕೆಗಳ ಒಕ್ಕೂಟದ (CII) ಮಾಜಿ ಅಧ್ಯಕ್ಷ ಕ್ರಿಶ್ ಗೋಪಾಲಕೃಷ್ಣನ್ ಅವರು ಭೇಟಿ ಮಾಡಿ ಬ್ರಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು. ಸಿಐಐ ಕರ್ನಾಟಕ ಘಟಕದ ಅಧ್ಯಕ್ಷ ವಿಜಯಕುಮಾರ್, ಪ್ರಾದೇಶಿಕ ನಿರ್ದೇಶಕ ಜೆಯೇಶ್, ಬ್ರಾಂಡ್ ಬೆಂಗಳೂರು ಕಾರ್ಯಪಡೆ ಸದಸ್ಯ ಚೇತನ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ:Karnataka Budget: ಬ್ರ್ಯಾಂಡ್​ ಬೆಂಗಳೂರಿಗೆ ಹಲವು ಕ್ರಮಗಳು; ತ್ಯಾಜ್ಯ, ಸಾರಿಗೆ ಸಮಸ್ಯೆ ನಿವಾರಣೆಗೆ ಒತ್ತು

ABOUT THE AUTHOR

...view details