ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಜನರು ಹಾಗೂ ಶಾಸಕರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಇಂದೇ ಅವರು ರಾಜೀನಾಮೆ ಸಲ್ಲಿಸಬೇಕು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ ಇಂದೇ ರಾಜೀನಾಮೆ ನೀಡಬೇಕು : ಶೋಭಾ ಕರಂದ್ಲಾಜೆ - undefined
ಮುಖ್ಯಮಂತ್ರಿ ಕುಮಾರಸ್ವಾಮಿ ಜನರ ಮತ್ತು ಶಾಸಕರ ವಿಶ್ವಾಸ ಕಳೆದುಕೊಂಡಿದ್ದುಇವತ್ತೇ ರಾಜೀನಾಮೆ ನೀಡಬೇಕು ಎಂದು ಶೋಭಾಕರಂದ್ಲಾಜೆ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಅಧಿವೇಶನ ಮತ್ತೆ ಇಂದಿನಿಂದ ಆರಂಭವಾಗುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಜನರು ಮತ್ತು ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಕೇವಲ ಒಂದೇ ವರ್ಷದಲ್ಲಿ ಮಹಾಘಟಬಂಧನ ವೈಫಲ್ಯವನ್ನು ಕಂಡಿದೆ. ಮುಖ್ಯಮಂತ್ರಿಗಳಿಗೆ ಇರುವುದು ಒಂದೇ ದಾರಿ ಇವತ್ತು ರಾಜೀನಾಮೆ ನೀಡಬೇಕು. ಹೊಸ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡಬೇಕು. ಇದು ಜನರ ಮತ್ತು ಶಾಸಕರ ಆಗ್ರಹವಾಗಿದೆ ಎಂದು ತಿಳಿಸಿದ್ದಾರೆ.