ಬೆಂಗಳೂರು:ನಾಳೆ ಸದನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತಯಾಚಿಸಲಿದ್ದು ಕುಮಾರಸ್ವಾಮಿ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಶ್ವಾಸ ಮತದಲ್ಲಿ ಸಿಎಂ ಕುಮಾರಸ್ವಾಮಿಗೆ ಸೋಲಾಗಲಿದೆ: ಬಿಎಸ್ವೈ - kannadanews
ಗುರುವಾರ ಸದನದಲ್ಲಿ ವಿಶ್ವಾಸಮತ ಯಾಚಿಸಲಿರುವ ಸಿಎಂ ಕುಮಾರಸ್ವಾಮಿ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿಶ್ವಾಸ ಮತಯಾಚನೆಯಲ್ಲಿ ಸಿಎಂಗೆ ಸೋಲಾಗಲಿದೆ, ನಮಗೆ ಜಯ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು. ಬಂಡಾಯ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇಂದು 10.30 ಕ್ಕೆ ಪ್ರಕಟವಾಗಲಿದೆ. ಕೋರ್ಟ್ ತೀರ್ಪು ಏನಾಗಿರುತ್ತದೆ ಎಂದು ನಾವೂ ಕಾದು ನೋಡುತ್ತಿದ್ದೇವೆ. ಇದರಿಂದ ರಾಜ್ಯ ರಾಜಕೀಯದಲ್ಲಿ ಯಾವ ಬದಲಾವಣೆ ಆಗಲಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದರು.
ನಾನೀಗ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಹೋಗ್ತಾ ಇದ್ದೀನಿ. ಅಲ್ಲಿ ವಿಶೇಷ ಪೂಜೆ ಮಾಡಿ ಬರುತ್ತೇನೆ. ಬಳಿಕ ರೆಸಾರ್ಟ್‌ಗೆ ಹೋಗುತ್ತೇನೆ ಎಂದು ತಿಳಿಸಿದ್ರು.