ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ತಮ್ಮ ಮಗನ ಗೆಲುವಿಗಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಲಿದ್ದಾರೆ.
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ತೆರಳಲಿದ್ದಾರೆ.
ನಿಖಿಲ್ ದೋಷ ನಿವಾರಣೆಗೆ ಕುಟುಂಬ ಸಮೇತ ಪಳನಿಗೆ ತೆರಳಲಿರುವ ಸಿಎಂ - ಸಿಎಂ
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ತೆರಳಲಿದ್ದಾರೆ.
ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಸಿಎಂ ಭಾಗಿಯಾಗಲಿದ್ದಾರೆ. ಇದಾದ ನಂತರ ಬೆಂಗಳೂರಿಗೆ ಆಗಮಿಸಲಿರುವ ಕುಮಾರಸ್ವಾಮಿ ಅವರು, ಕುಟುಂಬ ಸಮೇತರಾಗಿ ಪಳನಿಯ ಮುರುಗಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನಿಖಿಲ್ಗೆ ಜ್ಯೋತಿಷಿಗಳ ಪ್ರಕಾರ ಈ ವರ್ಷ ಸರಿಯಿಲ್ಲ ಎಂದು ಹೇಳಲಾಗಿದೆಯಂತೆ. ಈ ಕಾರಣಕ್ಕಾಗಿ ನಿಖಿಲ್ರ ದೋಷ ನಿವಾರಣೆಗಾಗಿ ಸಿಎಂ ಕುಟುಂಬ ಮುರುಗ ದೇವರಿಗೆ ಪೂಜೆ ಮಾಡಿಸಿ ಪಳನಿಗೆ ತೆರಳಿ ನಂತರ ಇಂದೇ ಹಿಂದಿರುಗಲಿದ್ದಾರೆ ಎನ್ನಲಾಗಿದೆ.