ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನಿರ್ದೇಶಕರ ಮಂಡಳಿ ಸಭೆ ಜರುಗಿತು.
ಕೃಷ್ಣಾ ಭಾಗ್ಯ ಜಲ ನಿಗಮ ನಿರ್ದೇಶಕ ಮಂಡಳಿ ಜೊತೆ ಸಿಎಂ ಸಭೆ - Krishna Bhagya Water Corporation Board
ಇಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ನಿರ್ದೇಶಕರ ಮಂಡಳಿ ಸಭೆ ಜರುಗಿತು. ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೃಷ್ಣಾ ಭಾಗ್ಯ ಜಲ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೃಷ್ಣಾ ಭಾಗ್ಯ ಜಲ ನಿಗಮ ನಿರ್ದೇಶಕ ಮಂಡಳಿ ಜೊತೆ ಸಿಎಂ ಸಭೆ
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಆರ್ಥಿಕ ಸ್ಥಿತಿಗತಿಗಳ ಕುರಿತು ವಿವರ ಪಡೆದುಕೊಂಡರು.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ ವಿ ರಮಣರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.