ಬೆಂಗಳೂರು: ಶಾಸಕರ ಅಹವಾಲು ಆಲಿಸಿ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆದಿರುವ ಶಾಸಕರ ಸಮಾಲೋಚನಾ ಸಭೆ ಇಂದೂ ಕೂಡ ಮುಂದುವರೆಯಲಿದೆ.
ಈ ಸುದ್ದಿಯನ್ನೂ ಓದಿ:ಮುಂಬೈ ಮತ್ತು ಮಧ್ಯ ಕರ್ನಾಟಕದ ಶಾಸಕರ ಜೊತೆ ಸಿಎಂ ಚರ್ಚೆ: ಶಮನವಾಗುತ್ತಾ ಯತ್ನಾಳ್ ಮುನಿಸು?

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅನುಪಸ್ಥಿತಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ಸಿಎಂ ಸಭೆ ನಡೆಸಲಿದ್ದಾರೆ. ಎರಡನೇ ದಿನವಾದ ಇಂದು ಮಧ್ಯಾಹ್ನ 12 ಗಂಟೆಯಿಂದ 1.30 ರವರೆಗೆ ಮಧ್ಯ ಕರ್ನಾಟಕ, ಮೈಸೂರು ಭಾಗದ ಶಾಸಕರ ಜೊತೆ ಸಿಎಂ ಸಮಾಲೋಚನೆ ನಡೆಸಲಿದ್ದು, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ 29 ಶಾಸಕರು ಭಾಗಿಯಾಗಲಿದ್ದಾರೆ.
ಈ ಸುದ್ದಿಯನ್ನೂ ಓದಿ:ಜನವರಿ 4, 5 ರಂದು ಬಜೆಟ್‌ಪೂರ್ವ ಶಾಸಕರ ಸಭೆ ಕರೆದ ಸಿಎಂ
ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿರುವ ಸಭೆಯಲ್ಲಿ ಕೇಂದ್ರ ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ 26 ಶಾಸಕರು ಭಾಗಿಯಾಗಲಿದ್ದಾರೆ.