ಬೆಂಗಳೂರು:ಪ್ರತಿ ಜಿಲ್ಲೆಯ ಜಿಲ್ಲಾ ವರಿಷ್ಟಾಧಿಕಾರಿಗಳು ಜನರ ಜೊತೆ ಬೆರೆತು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆ ಬಳಿಕ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಎರಡು ಗಂಟೆ ನಡೆದ ಸುದೀರ್ಘ ಸಭೆಯಲ್ಲಿ ಕೇಂದ್ರ ಗೃಹ ಇಲಾಖೆಯಿಂದ ಬಂದಿರುವ ಅಗತ್ಯ ಸಲಹೆ ಸೂಚನೆಗಳನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ತಿಳಿಸಿದರು.