ಬೆಂಗಳೂರು: ಎರಡನೇ ಹಂತದ ಲಾಕ್ಡೌನ್ ಜಾರಿ ಹಿನ್ನಲೆಯಲ್ಲಿ ಮಾರ್ಗಸೂಚಿ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ.
ಲಾಕ್ಡೌನ್ ಮಾರ್ಗಸೂಚಿ ಪಾಲನೆ ಕುರಿತು ಹಿರಿಯ ಸಚಿವರ ಜೊತೆ ಸಿಎಂ ಸಭೆ
ಎರಡನೇ ಹಂತದ ಲಾಕ್ಡೌನ್ ಜಾರಿ ಹಿನ್ನಲೆಯಲ್ಲಿ ಮಾರ್ಗಸೂಚಿ ಪಾಲನೆ ಕುರಿತು ಸಿಎಂ ನೇತೃತ್ವದ ಸಭೆ ಆರಂಭವಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಅಶೋಕ್, ಸುರೇಶ್ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.
ವಲಸೆ ಕಾರ್ಮಿಕರ ಸಮಸ್ಯೆ ಹಾಗು ಲಾಕ್ಡೌನ್ ಪಾಲನೆಗೆ ನೀಡಿರುವ ಮಾರ್ಗಸೂಚಿ ಅನುಷ್ಠಾನ ಕುರಿತು ಸಚಿವರೊಂದಿಗೆ ಸಿಎಂ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಏಪ್ರಿಲ್ 20ರವರೆಗೆ ಅವಲೋಕನ ಸಮಯ ನಿಗದಿಯಾಗಿದ್ದು, ನಂತರ ಕೊರೊನಾ ಸೋಂಕು ಕಡಿಮೆಯಾದರೆ ಲಾಕ್ಡೌನ್ ಸಡಿಲಿಕೆ ಮಾಡುವ ಸಾಧ್ಯತೆ ಬಗ್ಗೆ ಪ್ರಧಾನಿ ಮೋದಿ ಸುಳಿವು ನೀಡಿರುವ ಹಿನ್ನಲೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ.