ಕರ್ನಾಟಕ

karnataka

ETV Bharat / state

ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ, ಮತ್ತೊಂದು ಪ್ಯಾಕೇಜ್ ಘೋಷಣೆಯಾಗುತ್ತಾ? - CM meeting latest news

ಇಂದು ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ಇರುವ ಕಾರಣ ಸಿಎಂ ಬಿಎಸ್​ವೈ ​ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

B. S. Yediyurappa
ಬಿ.ಎಸ್.ಯಡಿಯೂರಪ್ಪ

By

Published : May 14, 2020, 12:30 PM IST

ಬೆಂಗಳೂರು:ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸುತ್ತಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ನಂತರ ಇತರ ಕೆಲ ವರ್ಗಗಳು ಪ್ಯಾಕೇಜ್ ನಲ್ಲಿ ನಮ್ಮ ವರ್ಗಗಳನ್ನೂ ಸೇರಿಸಬೇಕು ಎಂದು ಮನವಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಯಾವ ವರ್ಗಗಳಿಗೆ ನೆರವು ನೀಡಬಹುದು, ಬಿಟ್ಟಿರುವ ಕೆಲ ವರ್ಗಕ್ಕೆ ಹೊಸದಾಗಿ ಪ್ಯಾಕೇಜ್ ಘೋಷಣೆ ಮಾಡಬೇಕಾ ಅಥವಾ ಈಗಾಗಲೇ ಘೋಷಿಸಿರುವ ಪ್ಯಾಕೇಜ್​ನಲ್ಲೇ ಸೇರಿಸಬೇಕಾ ಎನ್ನುವ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ.

ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಇದ್ದು ಸಭೆಯಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸಿಎಂ ಬಿಎಸ್​ವೈ ಹಿರಿಯ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದಾರೆ.

ABOUT THE AUTHOR

...view details