ಕರ್ನಾಟಕ

karnataka

ETV Bharat / state

ಮೋದಿ ಜೊತೆಗಿನ‌ ಸಭೆಗೂ ಮುನ್ನ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ - CM yeddyurappa meeting

ಕೊರೊನಾ ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಗೆ ಮುನ್ನ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬಿಎಸ್​ವೈ ಸಭೆ ನಡೆಸಿದರು.

cm-meeting-with-senior-officials
ಮೋದಿ ಜೊತೆಗಿನ‌ ಸಭೆಗೂ ಮುನ್ನ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ

By

Published : Apr 8, 2021, 6:18 PM IST

ಬೆಂಗಳೂರು:ಕೊರೊನಾ ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಗೂ ಮೊದಲು ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೊರೊನಾ ನಿಯಂತ್ರಣ ಕುರಿತು ರಾಜ್ಯ ಕೈಗೊಂಡಿರುವ ಕ್ರಮಗಳು, 13 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದು, ಅಲ್ಲಿ ಕೈಗೊಂಡಿರುವ ಕ್ರಮಗಳು, ಎರಡನೇ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಮಗ್ರವಾಗಿ ಸಿಎಂಗೆ ಮಾಹಿತಿ ನೀಡಿದರು.

ಪ್ರಧಾನಿ ಮೋದಿ ಜೊತೆಗಿನ‌ ಸಭೆಯಲ್ಲಿ ರಾಜ್ಯದಿಂದ ನೀಡಬೇಕಾದ ವಿವರಗಳು, ಅಗತ್ಯತೆ, ಕೇಂದ್ರದಿಂದ ಏನೆಲ್ಲಾ ನಿರೀಕ್ಷೆ ಮಾಡಲಾಗುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಹಠ ಬಿಟ್ಟು ಮಾತುಕತೆಗೆ ಬನ್ನಿ, ಪರಿಸ್ಥಿತಿ ಬಂದರೆ ಎಸ್ಮಾ ಜಾರಿ: ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ

ABOUT THE AUTHOR

...view details