ಕರ್ನಾಟಕ

karnataka

ETV Bharat / state

ಸಿಎಂ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಭೇಟಿ.. ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಪದೋಷ ಚರ್ಚೆ - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು-ಮೈಸೂರು ಹೆದ್ದಾರಿ ಅವಘಡಗಳನ್ನು ತಪ್ಪಿಸಲು ಪ್ರವೇಶ, ನಿರ್ಗಮನ ಬೈಪಾಸ್​ಗಳನ್ನು ಒದಗಿಸಬೇಕು. ರಸ್ತೆ ಬದಿ ಸೌಕರ್ಯಗಳನ್ನು ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಅವರಲ್ಲಿ ಮನವಿ ಮಾಡಿದರು.

CM meets Union Transport Minister Gadkari
ಸಿದ್ದರಾಮಯ್ಯ ಅವರು ಕೇಂದ್ರ ಸಾರಿಗೆ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

By

Published : Aug 3, 2023, 5:17 PM IST

ನವದೆಹಲಿ/ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬೆಳಕಿಗೆ ತರುವ ಮೂಲಕ ಗಮನ ಸೆಳೆದರು.

ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪದೋಷ ಸರಿಪಡಿಸುವುದಾಗಿ ಗಡ್ಕರಿ ಭರವಸೆ ನೀಡಿದ್ದಾರೆ. ಶಿರಾಡಿ ಘಾಟ್ ಸುರಂಗ ಮಾರ್ಗದ ಕುರಿತು ಸಚಿವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿ ಅವಘಡ ತಡೆಗೆ ಹಲವು ಬೇಡಿಕೆ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅವಘಡಗಳನ್ನು ತಪ್ಪಿಸಲು ಪ್ರವೇಶ ಹಾಗೂ ನಿರ್ಗಮನ ಬೈಪಾಸ್​ಗಳನ್ನು ಒದಗಿಸಬೇಕು. ಜೊತೆಗೆ ರಸ್ತೆ ಬದಿ ಸೌಕರ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಶಿರಾಡಿ ಘಾಟ್ ನ ಮಾರನಹಳ್ಳಿಯಿಂದ ಅಡ್ಡಹೊಳೆ ವಿಭಾಗದ ನಡುವೆ ಟನೆಲ್ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.

ಹೆಚ್ಚು ಅನುದಾನ ಮಂಜೂರಾತಿಗೆ ಮನವಿ:10 ಸಾವಿರ ಕೋಟಿ ರೂ ಮೊತ್ತದ ವಾರ್ಷಿಕ ಯೋಜನೆಗಳಡಿ ರಾಷ್ಟ್ರೀಯ ಹೆದ್ದಾರಿಗಳಿಗೆ ಹೆಚ್ಚು ಅನುದಾನ ಮಂಜೂರಾತಿ ನೀಡುವಂತೆ ಮನವಿ ಮಾಡಿದರು. ನೆರೆ ಹಾನಿ ದುರಸ್ತಿಗೆ 250 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಕೇಂದ್ರ ಸರ್ಕಾರ ನಿರ್ವಹಣೆ ಹಾಗೂ ದುರಸ್ತಿ ಯೋಜನೆಯಡಿ ನೀಡುವ ಅನುದಾನವನ್ನು 50 ಕೋಟಿ ರೂ ಗೆ ಹೆಚ್ಚಿಸಲು ಕೋರಿದರು. ರಾಜ್ಯ ರಸ್ತೆ ಹಾಗೂ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ 2023-24 ಸಾಲಿನಲ್ಲಿ 1000 ಕೋಟಿ ರೂ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವ ಗಡ್ಕರಿ ಅವರಲ್ಲಿ ಕೋರಿದರು.

ಯಾವೆಲ್ಲಾ ಹೆದ್ದಾರಿ ಯೋಜನೆ ಮಂಜೂರಾತಿಗೆ ಮನವಿ? ಕೇರಳ-ಕರ್ನಾಟಕ ಗಡಿಯನ್ನು ಗುಂಡ್ಲುಪೇಟೆಯಿಂದ ಕೊಳ್ಳೆಗಾಲ ಸಂಪರ್ಕಿಸುವ ಎನ್ ಹೆಚ್ 766 ರಸ್ತೆಯ 4/6 ಪಥದ ಅಗಲೀಕರಣ, ಮಲವಳ್ಳಿ ಮತ್ತು ಕೊಳ್ಳೆಗಾಲ ಮೂಲಕ ಕನಕಪುರದಿಂದ ತಮಿಳುನಾಡು ಗಡಿ ಸಂಪರ್ಕಿಸುವ N H 948 ರಸ್ತೆಯನ್ನು 4ನೇ ಪಥದ ಅಗಲೀಕರಣಕ್ಕೆ ಸಂಬಂಧಿಸಿದಂತೆ ಮನವಿ ಮಾಡಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಭೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ‌ ಪ್ರತಿನಿಧಿ ಟಿ ಬಿ ಜಯಚಂದ್ರ ಹಾಜರಿದ್ದರು. ರಾಜ್ಯಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಜಿ ಎಸ್ ಟಿ ತೆರಿಗೆಯಡಿ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ :ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 20-24 ಸ್ಥಾನ ಗೆಲ್ಲುವ ಭರವಸೆ; ಒಬ್ಬ ಹಿರಿಯ ನಾಯಕ, ಒಬ್ಬ ಸಚಿವರಿಗೆ ತಲಾ ಒಂದು ಕ್ಷೇತ್ರದ ಹೊಣೆ

ABOUT THE AUTHOR

...view details