ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರು ನಗರದಲ್ಲಿ ನಡೆದ ಪ್ರತಿಭಟನೆ ಮತ್ತು ಕೈಗೊಂಡ ಭದ್ರತಾ ಕ್ರಮಗಳ ಬಗ್ಗೆ ವರದಿ ಸಲ್ಲಿಸಿದರು. ಎಲ್ಲೆಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ, ನಾಳೆ ಪ್ರತಿಭಟನೆ ನಡೆದರೆ ಯಾವ ರೀತಿ ಭದ್ರತೆ, ಕಟ್ಟೆಚ್ಚರ ವಹಿಸಬೇಕು ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಚರ್ಚಿಸುತ್ತಿದ್ದಾರೆ. ಮುಖ್ಯವಾಗಿ ಮಂಗಳೂರು, ಕಲಬುರಗಿ , ಹುಬ್ಬಳ್ಳಿ-ಧಾರವಾಡ ಹಾಗೂ ಬೆಂಗಳೂರಿನಲ್ಲಿ ಹೆಚ್ಚು ಭದ್ರತೆ ಕಲ್ಪಿಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ದೂರವಾಣಿ ಮೂಲಕ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಜೊತೆಯೂ ಸಿಎಂ ಮಾತುಕತೆ ನಡೆಸಿ ಕಾನೂನು ಸುವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.