ಕರ್ನಾಟಕ

karnataka

ETV Bharat / state

ರಾಜ್ಯಪಾಲರ ಆರೋಗ್ಯ ವಿಚಾರಿಸಿದ‌ ಸಿಎಂ! - Governor Vajubhai Vala in hospital

ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯಪಾಲ ವಜುಭಾಯಿ ವಾಲಾ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಿಎಂ ಬಿಎಸ್​​ವೈ ರಾಜ್ಯಪಾಲರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು

Cm Met Governor in hospital
ರಾಜ್ಯಪಾಲರ ಆರೋಗ್ಯ ವಿಚಾರಿಸಿದ‌ ಸಿಎಂ!

By

Published : Nov 27, 2019, 1:39 PM IST

ಬೆಂಗಳೂರು:ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯಪಾಲ ವಜುಭಾಯ್ ವಾಲಾ ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ತೆರಳಿ ರಾಜ್ಯಪಾಲರ ಆರೋಗ್ಯ ವಿಚಾರಿಸಿದರು.

ಚುನಾವಣಾ ಪ್ರಚಾರಕ್ಕಾಗಿ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸ ಧವಳಗಿರಿಯಿಂದ ಹೊಸಕೋಟೆ ಕಡೆ ಹೊರಟ ಸಿಎಂ, ರಾಜ್ಯಪಾಲರ ಅನಾರೋಗ್ಯ ವಿಷಯ ತಿಳಿದು ಹೊಸಕೋಟೆಗೆ ತೆರಳುವ ಮುನ್ನ ನಗರದ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ರಾಜ್ಯಪಾಲರ ಭೇಟಿ ನಂತರ ಹೊಸಕೋಟೆಗೆ ತೆರಳಿದ ಸಿಎಂ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪರ ಪ್ರಚಾರ ನಡೆಸಲಿದ್ದಾರೆ.

ABOUT THE AUTHOR

...view details