ಬೆಂಗಳೂರು:ದಕ್ಷತೆ, ಸಮಯ ಬದ್ಧತೆಯಿಂದ ಕೆಲಸ ಮಾಡಬೇಕು. ಜಿಲ್ಲಾ ಆಡಳಿತ ಚುರುಕುಗೊಳಿಸಬೇಕು ಹಾಗೂ ಜನಪರವಾಗಿದ್ದು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಸತಿ, ಪಡಿತರ ಹಂಚಿಕೆ, ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನೆಗಳ ಪರಿಶೀಲನೆಯನ್ನು ಸಭೆಯಲ್ಲಿ ನಡೆಸಲಾಗಿದೆ. ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.