ಕರ್ನಾಟಕ

karnataka

ETV Bharat / state

ಜೆಪಿ ನಡ್ಡಾರನ್ನು ಭೇಟಿಯಾದ ಸಿಎಂ: ಸಂಪುಟ ವಿಸ್ತರಣೆ ಕುರಿತು ನಡಿತಾ ಚರ್ಚೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಜೆಪಿ ನಡ್ಡಾರನ್ನು ಭೇಟಿಯಾದ ಸಿಎಂ
ಜೆಪಿ ನಡ್ಡಾರನ್ನು ಭೇಟಿಯಾದ ಸಿಎಂ

By

Published : Sep 8, 2021, 11:35 PM IST

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ಮರುನೇಮಕ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಿಲ್ಲ, ಜೆ.ಪಿ ನಡ್ಡಾ ಅವರ ಭೇಟಿಗೆ ಸಮಯಾವಾಕಾಶ ಕೋರಿಲ್ಲ, ಕೇವಲ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎನ್ನುತ್ತಲೇ ದೆಹಲಿಗೆ ತೆರಳಿದ್ದ ಸಿಎಂ ಇಂದು ನಡ್ಡಾ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದರು.

ಯಡಿಯೂರಪ್ಪ ನೇಮಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರಿಂದ ರಾಜೀನಾಮೆ ಪಡೆದು ಹೊಸಬರ ನೇಮಕ ಮಾಡುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ದೆಹಲಿ ಪ್ರವಾಸಕ್ಕೂ ಮುನ್ನ ಯಡಿಯೂರಪ್ಪರನ್ನು ಭೇಟಿಯಾಗಿ ಅಭಿಪ್ರಾಯ ಪಡೆದಿದ್ದ ಸಿಎಂ, ಅದನ್ನು ನಡ್ಡಾ ಮುಂದಿಟ್ಟು ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ಸಿಎಂ

ಇನ್ನು ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇದ್ದು, ಅವುಗಳ ಭರ್ತಿ ಮಾಡುವ ಕುರಿತು ಅನೌಪಚಾರಿಕ ಮಾತುಕತೆ ನಡೆಸಿದರು ಎನ್ನಲಾಗಿದೆ. ಖಾತೆ ಹಂಚಿಕೆ ಅಸಮಧಾನದ ನಂತರ ನಡೆದಿರುವ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ. ಆದರೆ ಸಂಪುಟ ವಿಸ್ತರಣೆ ಕುರಿತು ನಿರ್ಧಾರದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ದೆಹಲಿಯಲ್ಲಿ ಸಿಎಂ

ಹಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ನಂತರ ಕೇಂದ್ರ ಬಂದರು, ಹಡಗು, ಜಲಸಾರಿಗೆ ಮತ್ತು ಆಯುಷ್ ಖಾತೆ ಸಚಿವ ಸರ್ಬಾನಂದ ಸೋನೋವಾಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಬಳಿಕ ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.

ABOUT THE AUTHOR

...view details