ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರವಾಗಿ ನಡೆದ ಸಮಾವೇಶದಲ್ಲಿ ದಿಗ್ಗಜರ ಭಾಷಣದ ಸಾರಾಂಶವನ್ನು ನಾನು ಗ್ರಹಿಸಿದ್ದೇನೆ. ಅವರಿಗೆ ಉತ್ತರ ನೀಡುವ ಶಕ್ತಿ ಮಂಡ್ಯ ಜಿಲ್ಲೆಯ ನನ್ನ ಬಾಂಧವರಿಗಿದೆ ಎಂದು ಸಿಎಂ ಕುಮಾಸ್ವಾಮಿ ಟ್ವೀಟ್ ಮೂಲಕ ನಟ ದರ್ಶನ್ ಹಾಗೂ ಯಶ್ಗೆ ಟಾಂಗ್ ಕೊಟ್ಟಿದ್ದಾರೆ.
ಜೋಡೆತ್ತುಗಳಿಗೆ ಟ್ವೀಟ್ ಮೂಲಕ ಸಿಎಂ ಕುಮಾರಸ್ವಾಮಿ ಟಾಂಗ್ - ಸಿಎಂ
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ನಟರಾದ ದೆರ್ಶನ್ ಮತ್ತು ಯಶ್ ವಿರುದ್ಧ ಸಿಎಂ ಕುಮಾರಸ್ವಾಮಿ ಟ್ವಿಟರ್ನಲ್ಲಿ ಗುಡುಗಿದ್ದಾರೆ.
ಹೆಸರು ಪ್ರಸ್ತಾಪಿಸದೇ ಟ್ವೀಟ್ ಮಾಡಿರುವ ಕುಮಾರಸ್ವಾಮಿ ನನ್ನ ಬಗ್ಗೆ ಮಾಡಿರುವ ವೈಯುಕ್ತಿಕ ಆಪಾದನೆಗಳಿಗೆ ಜನರೇ ಉತ್ತರ ಕೊಡುತ್ತಾರೆ. ಅಂಬರೀಶ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕದ್ದು. ಅದು ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನವಾಗಿದ್ದು, ಈ ಸ್ನೇಹಕ್ಕೆ ಅವರ ಕುಟುಂಬ ಸೂಕ್ತ ಕಾಣಿಕೆ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮಂಡ್ಯದ ಮಣ್ಣಿನ ಮೇಲೆ ನಿಂತು ನಾನು ಮಾತನಾಡುತ್ತಿದ್ದು, ಪಕ್ಷೇತರ ಅಭ್ಯರ್ಥಿಯ ಪ್ರತಿಯೊಂದು ಮಾತು ಕೂಡ ಮತದಾರರನ್ನು ಮೋಡಿ ಮಾಡುವ ತಂತ್ರ ಎಂಬುದರ ನಿಚ್ಚಳ ಅರಿವು ಜನರಿಗಿದೆ. ಇದಕ್ಕಿಂತ ಹೆಚ್ಚು ಹೇಳಲು ನಾನು ಇಚ್ಛಿಸುವುದಿಲ್ಲ ಎಂದು ಟ್ವೀಟ್ನಲ್ಲಿ ಪರೋಕ್ಷವಾಗಿ ಸುಮಲತಾ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.