ಕರ್ನಾಟಕ

karnataka

ETV Bharat / state

ಕೆಆರ್​ಎಸ್​ ಅಣೆಕಟ್ಟಿ ವ್ಯಾಪ್ತಿಯಲ್ಲಿ ಗಣಿಗಾರಿಕೆ.. ತಡೆಗಟ್ಟಲು ಸಿಎಂ ಕಟ್ಟುನಿಟ್ಟಿನ ಸೂಚನೆ - ಕೆಆರ್​ಎಸ್​ ಅಣೆಕಟ್ಟಿನಲ್ಲಿ ಗಣಿಗಾರಿಕೆ ಲೆಟೆಸ್ಟ್ ನ್ಯೂಸ್​

ಕೆಆರ್​ಎಸ್​ ಡ್ಯಾಂ ಹಾಗೂ ಬೃಂದಾವನ ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆ ತಡೆಯುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್​ ಆದೇಶ ನೀಡಿದ್ದಾರೆ.

ಕೆಆರ್​ಎಸ್​ ಅಣೆಕಟ್ಟು
KRS Dam

By

Published : Jan 6, 2020, 8:53 AM IST

ಬೆಂಗಳೂರು :ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಸಿಎಂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ABOUT THE AUTHOR

...view details